ಬೈಲಹೊಂಗಲ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಷ್ಟ್ರೀಯ ನಾಯಕರ ಅವಹೇಳನ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್ ಡಿ ಪಿ ಐ ಪಕ್ಷದ ವತಿಯಿಂದ ಶನಿವಾರ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಅಮಿತ್ ಶಾ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಎಸ್ ಡಿ ಪಿ ಐ ನ ತಾಲೂಕು ಅಧ್ಯಕ್ಷ ಮಲಿಕಜಾನ್ ಮುಲ್ಲಾ ಮಾತನಾಡಿ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ. ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇಲಿಯಾಸ ದೊಡಮನಿ, ಮುಖ್ತಾರ್ ಬಾಗೇವಾಡಿ, ಆಕೀಬ ಪಟ್ಟಿಹಾಳ,ಮುಜಫ್ಫರ್ ಬಾಗವಾನ,
ರುದ್ರಪ್ಪ ಗರ್ಜೂರ, ಸುರೇಶ ರಾಯಪ್ಪಗೊಳ, ವಸಿಮ ಮುಜಾವರ ಅನೇಕರು ಇದ್ದರು.
Kshetra Samachara
21/12/2024 02:43 pm