Av
Headline
ಕೋಲಾರ - ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ದಲಿತ ಪರ ಸಂಘಟನೆಗಳ ಪ್ರತಿಭಟನೆ
ಮಾಲೂರು : ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ ಬಿ ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವುದನ್ನು ಖಂಡಿಸಿ ಅಮಿತ್ ಶಾ ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಿ ದೇಶದಿಂದ ಗಡಿ ಪಾರು ಮಾಡಬೇಕೆಂದು ದಲಿತ ಪರ ಸಂಘಟನೆಗಳು ಒಕ್ಕೂಟ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಿದರು, ಸಂಸತ್ ಭವನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಡಾ ಬಿ ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನ ರೀತಿಯಲ್ಲಿ ಮಾತನಾಡಿರುವುದು ಖಂಡಿಸಿ ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾರಿಕಾಂಬಾ ವೃತ್ತದ ಬಳಿ ಪ್ರತಿಕೃತಿ ದಹನ ಮಾಡಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ತಹಶಿಲ್ದಾರ್ ಕೆ ರಮೇಶ್ ಆಗಮಿಸಿ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ದಲಿತ ನಾಗರೀಕ ಸಮಿತಿ, ದಲಿತ ಸಿಂಹ ಸೇನೆ ಕರ್ನಾಟಕ, ನಮ್ಮ ಕರ್ನಾಟಕ ಸೇನೆ, ಸಮತಾ ಸೈನಿಕ ದಳ ಸೇರಿದಂತೆ ವಿವಿಧ ಸಂಘಟನೆಎ ಭಾಗವಹಿಸಿದ್ದವು.
Kshetra Samachara
21/12/2024 02:55 pm