ಚಿತ್ರದುರ್ಗ: ಭರಮಸಾಗರ ಸಮೀಪದ ಕೊಳಹಾಳ್ ಮತ್ತು ಚಿಕ್ಕಬೆನ್ನೂರು ಗ್ರಾಮದ ನಡುವೆ ಬೈಕ್ ಅಪಘಾತ ನಡೆದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಸಮೀಪದ ಚಿಕ್ಕಬೆನ್ನೂರು ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದಿರುವುದರಿಂದ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೈಕ್ ಸವಾರರು ಚಿತ್ರದುರ್ಗ ಕಡೆಗೆ ಬರುವಾಗ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಬಿದ್ದಿದೆ, ಸಾರ್ವಜನಿಕರು ಗಾಯಾಳುಗಳನ್ನು ಉಪಚರಿಸಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ 112 ವಾಹನದ ಮೂಲಕ ರವಾನಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
21/12/2024 03:07 pm