ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಜೊತೆಗೆ ಕುಶಲೋಪಾರಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಆಗಾಗ ಆಸ್ಪತ್ರೆಯ ಸಮಸ್ಯೆಗಳನ್ನು ಕೇಳುತ್ತಿದ್ದೆವು. ಹಾಗಾಗಿ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಭೇಟಿ ನೀಡಿದ್ದೇವೆ ಎಂದು ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದ್ದಾರೆ.
ಕೆಲವೊಂದಿಷ್ಟು ಸಮಸ್ಯೆಗಳು ಈಗಲೂ ಕೂಡ ಜಿಲ್ಲಾಸ್ಪತ್ರೆಯಲ್ಲಿ ಜೀವಂತವಾಗಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜೊತೆಗೆ ವೈದ್ಯಾಧಿಕಾರಿಗಳು ಸಹ ಕೈಜೋಡಿಸಬೇಕಾಗಿದೆ ಎಂದು ತಿಳಿಸಿದರು.
Kshetra Samachara
21/12/2024 03:11 pm