ಧಾರವಾಡ: ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನಡೆದಿದ್ದ ಹೋರಾಟದ ವೇಳೆ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರಶ್ನಿಸಿ ಇದೀಗ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಬಗ್ಗೆ ಧಾರವಾಡದಲ್ಲಿ ಮಾಹಿತಿ ನೀಡಿದ ಸ್ವಾಮೀಜಿ, ಧಾರವಾಡದ ಹೈಕೋರ್ಟ್‌ನಲ್ಲಿ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಲಾಗಿದೆ. ಧಾರವಾಡ ಹೈಕೋರ್ಟ್‌ನ ಏಕಸದಸ್ಯ ಪೀಠದಿಂದ ಈ ನೋಟಿಸ್ ಜಾರಿ ಮಾಡಲಾಗಿದೆ ಎಂದರು.
ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ನಾಲ್ವರಿಂದ ಈ ರಿಟ್ ಅರ್ಜಿ ಸಲ್ಲಿಸಲಾಗಿದೆ. ಲಾಠಿ ಚಾರ್ಜ್ ಮಾಡಿದ ಮೇಲೆ ಎಫ್‌ಐಆರ್ ದಾಖಲಿಸಲಾಗಿ. 12 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಅದನ್ನು ರದ್ದುಪಡಿಸಬೇಕು ಎಂದು ನಾವು ಕೇಳಿದ್ದೆವು. ಸಿಎಂ ಕ್ಷಮೆಯಾಚಿಸಬೇಕು ಎಂದೂ ಕೇಳಿದ್ದೆವು ಆದರೆ, ಸಿಎಂ ಯಾವುದಕ್ಕೂ ಸ್ಪಂದಿಸಲಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದರು.
ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ಸವದತ್ತಿ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಆಗಿದೆ. ನಾವು ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಹಲ್ಲೆ ಆಗಿದ್ದಕ್ಕೆ ಸಮಾಜದವರು ಧೃತಿಗೆಡುವುದು ಬೇಡ. ಹಲ್ಲೆ ಆದವರಿಗೆ ಆತ್ಮಸ್ಥೈರ್ಯ ತುಂಬಲಿದ್ದೇವೆ. ಬೆಳಗಾವಿಯಲ್ಲಿ ಗಾಯಗೊಂಡವರ ಮನೆ, ಮನೆಗೆ ಡಿಸೆಂಬರ್ 23ಕ್ಕೆ ಭೇಟಿ ಮಾಡುವ ಕೆಲಸ ಮಾಡುತ್ತೇನೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/12/2024 03:52 pm