ನವಲಗುಂದ: ಕಟ್ಟಡ ಕಾರ್ಮಿಕರ ಕಾರ್ಡ್ ವರ್ಷಕ್ಕೊಮ್ಮೆ ಕಾರ್ಡ್ ನವೀಕರಣ ಮಾಡುವುದು ಕಷ್ಟಕರ ಇದರಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಮೇಲೆಯೂ ಕೂಡ ಬರೆ ಬೀಳುವ ಸಾಧ್ಯತೆಗಳು ಹೆಚ್ಚಾಗಿ ಇದೆ ಈಗಾಗಲೇ ನಮ್ಮ ಮಕ್ಕಳಿಗೆ ಸರಿಯಾಗಿ ಶಿಕ್ಷಣ ಶಿಷ್ಯವೇತನ ದೊರೆಯುತ್ತಿಲ್ಲ ಎಂದು ಕಾರ್ಮಿಕ ಸಂಘಟನೆಗಳಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಸಾಕಷ್ಟು ಬಾರಿ ಮನವಿ ನೀಡಿದರೂ ಸರಿಯಾದ ಸ್ಪಂದನೆ ಆಗುತ್ತಿಲ್ಲ. ಪ್ರತಿ ಮೂರು ವರ್ಷಕ್ಕೊಮ್ಮೆ ಕಾರ್ಮಿಕರ ಕಾಡುಗಳನ್ನು ನವೀಕರಿಸಬೇಕೆಂದು ಕಾರ್ಮಿಕರು ಒತ್ತಾಯಿಸಿದರು.
ಕಾರ್ಮಿಕ ಸಂಘಟನೆಯ ಲಕ್ಷ್ಮಣ ಗುಡಾರದ, ಮಲ್ಲಪ್ಪ ಹೆಬಸೂರು ಸೇರಿದಂತೆ ಅನೇಕರು ಇದ್ದರು.
Kshetra Samachara
21/12/2024 04:04 pm