ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಕೇಂದ್ರ ‌ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ದಲಿತ ಸಮಿತಿ ಕರ್ನಾಟಕ ಸಮಿತಿ ಒತ್ತಾಯ

ಬಂಗಾರಪೇಟೆ: ಡಾ.ಬಿ.ಆರ್.‌ ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಇದೇ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಪಿಚ್ಚಕಣ್ಣು ಮಾತನಾಡಿ, ಸಂಸತ್ತಿನಲ್ಲಿ ನಡೆದ ಸಂವಿಧಾನದ ೭೫ನೇ ವರ್ಷಾಚರಣೆಯ ಚರ್ಚೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಆಡಿರುವ ಅಪಮಾನಕರ ಮಾತುಗಳನ್ನು ತಾಲ್ಲೂಕು ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಸಂವಿಧಾನ ಶಿಲ್ಪಿ, ವಿಶ್ವ ಜ್ಞಾನಿ, ಗೌರವಾನ್ವಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕುಚೋದ್ಯದ ಮಾತುಗಳನ್ನು ಆಡುವ ಮೂಲಕ ಬಿಜೆಪಿ ಮತ್ತು ಸಂಘ ಪರಿವಾರದ ಜನಾಂಗ ದ್ವೇಷಿ ಮನೋಭಾವವನ್ನು ಸ್ಪಷ್ಟವಾಗಿ ತೋರ್ಪಡಿಸುತ್ತದೆ ಎಂದರು.

Edited By : PublicNext Desk
Kshetra Samachara

Kshetra Samachara

21/12/2024 04:05 pm

Cinque Terre

360

Cinque Terre

0