ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - : ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಬದ್ಧ - ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್

ಬಂಗಾರಪೇಟೆ: ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಬದ್ಧವಾಗಿದ್ದು ಸಾರ್ವಜನಿಕರ ಸಹಕಾರ ಅತ್ಯಗತ್ಯ,‌ ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು ಸಾರ್ವಜನಿಕರು ಶಾಂತಿ ಮತ್ತು ನೆಮ್ಮದಿಯಿಂದ ಅಮುಲ್ಯವಾದ ಜೀವನ ನಡೆಸಲು ಇರುವ ಕಾನೂನುಗಳನ್ನು ತಪ್ಪದೇ ಪರಿಪಾಲನೆ ಮಾಡಬೇಕು ಎಂದು ಬೂದಿಕೋಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ತಿಳಿಸಿದರು.

‌ತಾಲೂಕಿನ ಬೂದಿಕೋಟೆ ಪೊಲೀಸ್ ಇಲಾಖೆ ವತಿಯಿಂದ ಅಯೋಜಿಸಲಾಗಿದ್ದ ಅಪರಾಧ‌ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ‌ ಮಾತನಾಡಿದರು, ದೇಶದ ಆಂತರಿಕ ಭದ್ರತೆ‌ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಯು ದಿನದ 24 ಗಂಟೆ ಶ್ರಮಿಸಲು ಸಿದ್ಧರಿದ್ದಾರೆ ಇದರೊಟ್ಟಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಸಂಪೂರ್ಣವಾಗಿ ಅಪರಾಧ ಮುಕ್ತ ಸಮಾಜ‌ ಮಾಡಲು ಸಾದ್ಯ ಎಂದರು.

ಸಂಚಾರಿ ನಿಯಮ‌ ಪಾಲಿಸಿ, ಜೀವ ರಕ್ಷಿಸಿ. ಸಂಚಾರಿ‌ ನಿಯಮಗಳಿರುವುದು ಸಾರ್ವಜನಿಕರನ್ನು ಶಿಕ್ಷಿಸಲು ಅಲ್ಲ ಜನರ ಜೀವ ರಕ್ಷಣೆ ಮಾಡಲಿಕ್ಕಾಗಿ ಆದ್ದರಿಂದ ಪ್ರತಿಯೊಬ್ಬರು ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಟ್‌ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್‌ ಬೆಲ್ಟ್ ಹಾಕಿಕೊಳ್ಳಬೇಕು ಎಂದರು.‌

Edited By : PublicNext Desk
Kshetra Samachara

Kshetra Samachara

21/12/2024 04:11 pm

Cinque Terre

180

Cinque Terre

0

ಸಂಬಂಧಿತ ಸುದ್ದಿ