ಧಾರವಾಡ: ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಹೈಕೋರ್ಟ್ ವಕೀಲೆ ಪೂಜಾ ಸವದತ್ತಿ ಆಗ್ರಹಿಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಹೈಕೋರ್ಟ್‌ನಲ್ಲಿ ನಾವು ರಿಟ್ ಅರ್ಜಿ ಸಲ್ಲಿಸಿದ್ದೇವೆ. ಹೋರಾಟದ ವೇಳೆ 144 ಸೆಕ್ಷನ್ ಜಾರಿ ಆಗಿರಲಿಲ್ಲ. ಆದರೂ ನೇರವಾಗಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಇದನ್ನೆಲ್ಲ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇವೆ. ಲಾಠಿ ಚಾರ್ಜ್ ಬಳಿಕ ಪುನಃ ಸತ್ಯಾಗ್ರಹ ಇತ್ತು. ಸ್ವಾಮೀಜಿ ಡಿ.19ರ ವರೆಗೆ ಹೋರಾಟದಲ್ಲಿದ್ದರು. ಹೀಗಾಗಿ ನಾವು ನಿನ್ನೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದರು.
ಪ್ರಭುಲಿಂಗ ನಾವದಗಿ ಹಾಗೂ ನಾವು ಕೇಸ್ ರೆಡಿ ಮಾಡಿ ಅರ್ಜಿ ಸಲ್ಲಿಸಿದ್ದೇವೆ. ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ನ್ಯಾಯಾಂಗ ಆಯೋಗದಿಂದ ಕಮಿಟಿ ರಚನೆಗೆ ಆಗ್ರಹಿಸಿದ್ದೇವೆ. ಲಾಠಿ ಚಾರ್ಜ್ ಮಾಡಲು ಅಧಿಕಾರ ಕೊಟ್ಟವರ ವಿರುದ್ಧ ಕ್ರಮ ಆಗಬೇಕು. ಈ ಸಂಬಂಧ ತನಿಖೆ ಆಗಬೇಕು. ಸರ್ಕಾರದ ಹತ್ತು ಅಂಗಗಳಿಗೆ ಪ್ರತಿವಾದಿ ಮಾಡಲಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/12/2024 04:12 pm