ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಅಮಿತ್ ಷಾ ಸಂಪುಟದಿಂದ ವಜಾಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಸಂಯುಕ್ತ ಹೋರಾಟ ಸಮಿತಿ, ಸಿಪಿಐಎಂ, ಹಾಗೂ ದಸಂಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ ಮಾತನಾಡುವಾಗ ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕ‌ರವರನ್ನು ವ್ಯಸನಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ. ಇದು ಅವರ ದುರಹಂಕಾರ ಮತ್ತು ಅಂಬೇಡ್ಕರ್ ರವರ ಬಗ್ಗೆ ಸಂಘ ಪರಿವಾರ ಹೊಂದಿರುವ ನಿಜ ಸ್ಥಿತಿಯನ್ನು ಬಯಲು ಮಾಡಿದೆ ಕಳೆದ ಲೋಕಸಭಾ ಚುನಾವಣೆಗಳು ಉತ್ತರ ಕೊಟ್ಟಿವೆ ಆದರೂ ಬಿಜೆಪಿ ಮತ್ತು ಸಂಘ ಪರಿವಾರದ ದುರಹಂಕಾರ ಕಮ್ಮಿ ಹಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

21/12/2024 04:15 pm

Cinque Terre

100

Cinque Terre

0

ಸಂಬಂಧಿತ ಸುದ್ದಿ