ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಿ.ಟಿ. ರವಿ ಸದಸ್ಯತ್ವ ರದ್ದು ಮಾಡುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಫ್ಯಾನ್ಸ್ ಪ್ರೊಟೆಸ್ಟ್

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ಇಂದು ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಎರಡು ಸಾವಿರಕ್ಕೂ ಹೆಚ್ಚು ಬೆಂಬಲಿಗರು ಸಿ‌.ಟಿ. ರವಿ ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಪ್ರತಿಭಟನೆ ಆರಂಭಿಸಿದರು. ಮೆರವಣಿಗೆಯಲ್ಲಿ ಸಿ.ಟಿ. ರವಿ ಅವರ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿಗೆ ಸೀರೆ ಉಡಿಸಿ ಆಕ್ರೋಶ ಹೊರಹಾಕಿದ ಬೆಂಬಲಿಗರು, ಚಮ್ಮ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ಹಾಕಿದರು ಹಾಗೂ ಸಿ.ಟಿ. ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

ಇನ್ನೂ ಪ್ರತಿಭಟನೆಯಲ್ಲಿ ಶೋಕ ಸೂಚಿಸುವ ಹಾಡುಗಳನ್ನು ಹಾಕಿ ಸಿ.ಟಿ. ಸತ್ನಪ್ಪೊ ಸತ್ನೋ ಎಂದು ಬೊಬ್ಬೆ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಪಾಲರು ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.‌

ಒಟ್ಟಿನಲ್ಲಿ ಸಿ.ಟಿ. ರವಿ ವಿರುದ್ಧ ಎಲ್ಲೆಡೆ ಆಕ್ರೋಶ ಭುಗಿಲೆದ್ದಿದ್ದು, ಬೆಳಗಾವಿಯಲ್ಲೂ ಕೂಡಾ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು.

Edited By : Nagesh Gaonkar
PublicNext

PublicNext

21/12/2024 04:29 pm

Cinque Terre

21.96 K

Cinque Terre

0

ಸಂಬಂಧಿತ ಸುದ್ದಿ