ಬೆಂಗಳೂರು: ನಿಯಮ ಉಲ್ಲಂಘನೆ ಆರೋಪದಲ್ಲಿ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್‌ಗೆ ಬಿಬಿಎಂಪಿ ನೋಟಿಸ್ ಕೊಟ್ಟಿದೆ. ಫೈರ್ ಸೇಫ್ಟಿ ಅಳವಡಿಸಿಲ್ಲ ಅಂತಾ ನೋಟಿಸ್ ನೀಡಿರೋ ಪಾಲಿಕೆ ಅಗ್ನಿಶಾಮಕ ದಳದ NOC ಪಡೆಯದೇ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಇದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇರೋ ಒನ್ 8 ಬಾರ್ ಅಂಡ್ ರೆಸ್ಟೋರೆಂಟ್ ಅಂತ ತಿಳಿದು ಬಂದಿದೆ. ಈ ಸಂಬಂಧ ಪಾಲಿಕೆಗೆ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ದೂರು ನೀಡಿದ್ದಾರೆ. ದೂರು ಆಧರಿಸಿ ನೋಟಿಸ್ ನೀಡಿರೋ ಶಾಂತಿನಗರ ಪಾಲಿಕೆ ಅಧಿಕಾರಿಗಳು, ಆದ್ರೆ ಈ ಹಿಂದೆ ಕೂಡ ನೋಟಿಸ್ ನೀಡಿದ್ರೂ ಉತ್ತರಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಇದೀಗ 7 ದಿನದೊಳಗೆ ಸಮಜಾಯಿಸಿ ನೀಡದಿದ್ರೆ ಕಾನೂನು ಕ್ರಮದ ಎಚ್ಚರಿಕೆ ಕೊಡಲಾಗಿದೆ.
PublicNext
21/12/2024 05:37 pm