ಬೆಂಗಳೂರು: ನಗರದ ಮಹದೇವಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ ಹಾಗೂ ದಕ್ಷಿಣ ವಲಯಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು.
ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರುಗಳ ನೇತೃತ್ವದಲ್ಲಿ ಪಾಲಿಕೆಯ ವಿವಿಧ ಸ್ಥಳಗಳಲ್ಲಿ ಅಂಗಡಿ ಮುಗ್ಗಟ್ಟುಗಳು ಹಾಗೂ ಬೀದಿ ಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ನಾಗರಿಕರ ಓಡಾಟಕ್ಕೆ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.
ಪಾದಚಾರಿ ಮಾರ್ಗದಲ್ಲಿ ಅಕ್ರಮವಾಗಿ ಇಟ್ಟಿರುವಂತಹ ತಾತ್ಕಾಲಿಕ ಮಳಿಗೆಗಳು, ತಳ್ಳುಗಾಡಿಗಳು, ವ್ಯಾಪಾರಿ ಸಾಮಗ್ರಿಗಳು, ಜಾಹೀರಾತು ಫಲಕಗಳು, ಹಾಗೂ ಇನ್ನಿತರೆ ಸಾಮಗ್ರಿಗಳು ತೆರವುಗೊಳಿಸುವ ಮೂಲಕ ಪಾದಚಾರಿಗಳಿಗೆ ತೊಂದರೆಯುಂಟು ಮಾಡುತ್ತಿದ್ದ ಒತ್ತುವರಿಗಳನ್ನು ತೆರವುಗೊಳಿಸುವ ಮೂಲಕ ಪಾದಚಾರಿಗಳಿಗೆ ಒಡಾಡಲು ಸ್ಥಳಾವಕಾಶ ಕಲ್ಪಿಸಲಾಯಿತು.
ತೆರವು ಕಾರ್ಯಾಚರಣೆಯ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿ / ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
21/12/2024 07:19 pm