ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಇಂದು ವಿವಿಧ ಮತದಾರರ ಮನೆಗಳಿಗೆ ಭೇಟಿ ನೀಡಿ ಸೂಪರ್ ಚೆಕ್ಕಿಂಗ್ ಕಾರ್ಯವನ್ನು ನಡೆಸಿದರು.
ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆಯನ್ನು ಮಾಡಲಾಗುತ್ತದೆ. ಈ ಪೈಕಿ ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಇಂದು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.
ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2024 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 29.10.2024 ರಿಂದ 28.11.2024 ರವರೆಗೆ ಅವಕಾಶ ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿರುತ್ತಾರೆ.
ಭಾರತ ಚುನಾವಣಾ ಆಯೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡಲಾಗುತ್ತದೆ.
ಅದರಂತೆ ಇಂದು ಬ್ಯಾಟರಾಯನಪುರ, ಹೆಬ್ಬಾಳ, ವಿಜಯನಗರ ಹಾಗೂ ಗೋವಿಂದರಾಜನಗರ ಸೇರಿದಂತೆ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಮನೆಗಳಿಗೆ ಭೇಟಿ ನೀಡಿ ನಮೂನೆಗಳನ್ನು ಪರಿಶೀಲನೆ ನಡೆಸಿದರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ವೆಂಕಟೇಶಪುರ, ಸೂರ್ಯೋದಯ ಬಡಾವಣೆ ಹಾಗೂ ಥಣಿಸಂದ್ರದ ಶಬರಿ ನಗರದಲ್ಲಿ ನಮೂನೆಗಳನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರ ಬಳಿ ಚರ್ಚಿಸಿ ಪರಿಚ್ಕರಣೆ ಮಾಡಿರುವ ಬಗ್ಗೆ ಖಾತರಿಪಡಿಸಿಕೊಂಡರು.
ವೆAಕಟೇಶಪುರದಲ್ಲಿ ಮೃತಪಟ್ಟಿರುವ ಹಾಗೂ ಎರಡು ಕಡೆ ಹೆಸರಿರುವ ನಮೂನೆಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದಿರುವ ಬಗ್ಗೆ ಅಧಿಕಾರಿಗಳ ಬಳಿ ಖಾತರಿಪಡಿಸಿಕೊಂಡರು.
ಸೂರ್ಯೋದಯ ಬಡಾವಣೆಯಲ್ಲಿ ಎರಡು ಕಡೆ ಹೆಸರಿರುವ ಹಾಗೂ ಶಬರಿ ನಗರದಲ್ಲಿ ಬೇರೆಡೆ ಸ್ಥಳಾಮತರವಾಗಿರುವ ನಮೂನೆಗಳನ್ನು ಪರಿಶೀಲಿಸಲಾಯಿತು.
ಹೆಬ್ಬಾಳ ವಿಧಾನಸಭಾ ಕ್ಷೆತ್ರದಲ್ಲಿ ಮಂಜುನಾಥ್ ಬಡಾವಣೆ, ಸೀತಪ್ಪ ಬಡಾವಣೆ ಹಾಗೂ ವೆಂಕಟೇಶಪ್ಪ ಬಡಾವಣೆಯಲ್ಲಿ ನಮೂನೆ-06ರ ಮೂಲಕ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ 3 ನಮೂನೆಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು.
ವಿಜಯನಗರ ವಿಧಾನ ಸಭಾ ಕ್ಷೇತ್ರದ ಅತ್ತಿಗುಪ್ಪೆ ಬಳಿಯ ದ್ವಾರಕಾ ನಗರದಲ್ಲಿ ಹೊಸದಾಗಿ ಸೇರ್ಪಡೆಯಾಗಿದ್ದು, ನಮೂನೆಯನ್ನು ಪರಿಶೀಲಿಸಲಾಯಿತು.
ಕೊನೆಯದಾಗಿ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿ ಮತದಾರರ ಪಟ್ಟಿಯಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡಿರುವವ ಮನೆಗೆ ಭೇಟಿ ನೀಡಿದ ವೇಳೆ, ಮನೆಯ ಸದಸ್ಯರೊಬ್ಬರು ಮೃತಪಟ್ಟಿರುವುದನ್ನು ತಿಳಿದು ಕೂಡಲೆ ಅಗತ್ಯ ದಾಖಲೆಗಳನ್ನು ಪಡೆದು ಮೃತಪಟ್ಟವರ ಹೆಸರನ್ನು ಮತದಾರರ ಪಟ್ಟಿಯಿಂದ ತಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಶರಣಪ್ಪ, ಮತದಾರ ನೋಂದಣಾಧಿಕಾರಿಗಳು, ಬೂತ್ ಮಟ್ಟದ ಮೇಲ್ವಿಚಾರಕರು/ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
21/12/2024 07:33 pm