ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಹಾವೇರಿ: ಕೇಂದ್ರ ಗೃಹಸಚಿವ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಮತ್ತು ಮಾಜಿ ಸಚಿವ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಖಂಡಿಸಿ ಹಾವೇರಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಸಿ.ಟಿ ರವಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರಕ್ಕೆ ಪಾದರಕ್ಷೆಗಳಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೆ ಅಮಿತ್ ಶಾ ಮತ್ತು ಸಿ.ಟ.ರವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಲು ಮುಂದಾದದರು.

ಈ ಸಂದರ್ಭದಲ್ಲಿ ಪೊಲೀಸರು ಬೆಂಕಿ ಹಂಚಲು ಬಿಡದೆ ತಡೆಹಿಡಿದರು. ಪೊಲೀಸರಿಗೂ ಬಗ್ಗದೆ ಮಹಿಳಾ ಕಾರ್ಯಕರ್ತರು ಅಮಿತ್ ಶಾ ಮತ್ತು ಸಿ.ಟಿ.ರವಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

Edited By : Vinayak Patil
Kshetra Samachara

Kshetra Samachara

21/12/2024 07:53 pm

Cinque Terre

2.8 K

Cinque Terre

1

ಸಂಬಂಧಿತ ಸುದ್ದಿ