ಹುಬ್ಬಳ್ಳಿ: ಅರ್ಧಂಬರ್ಧ ಹೇಳಿಕೆ ಕೇಳಿ ಕೇಂದ್ರ ಸಚಿವರಾದ ಅಮಿತ್ ಶಾ ಅವರ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನ ಸಂಪೂರ್ಣವಾಗಿ ಕೇಳಿ ನಿರ್ಧಾರ ಮಾಡಬೇಕು. ಅರ್ಧಂಬರ್ಧ ಹೇಳಿಕೆ ಕೇಳಿ ಅವರ ವಿರುದ್ಧ ಆರೋಪ ಮಾಡೋದು ಸರಿಯಲ್ಲ ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ನವರು. ಅಂಬೇಡ್ಕರ್ ಅವರು ಚುನಾವಣೆಯಲ್ಲಿ ಸೋಲುವುದಕ್ಕೆ ಕಾಂಗ್ರೆಸ್ ಕಾರಣ. ಅಂಬೇಡ್ಕರ್ ವಿಚಾರದಲ್ಲಿ ನೆಗೆಟಿವ್ ಆಗಿ ನಡೆದುಕೊಳ್ಳೋದು ಕಾಂಗ್ರೆಸ್ ಎಂದು ಅವರು ಹೇಳಿದರು.
ಎಂಎಲ್ ಸಿ ಸಿ.ಟಿ. ರವಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈ ವಿಚಾರದಲ್ಲಿ ನಾವು ಈಗಾಗಲೇ ಕಾನೂನಾತ್ಮಕವಾಗಿ ಹೋರಾಟ ಮಾಡಿದ್ದೇವೆ. ಸರ್ಕಾರದ ಈ ನಡೆಯನ್ನ ನಾವು ಖಂಡಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮುಖಭಂಗ ಆದಂತಾಗಿದೆ. ಸಿಎಂ ಹಾಗೂ ಡಿಸಿಎಂ ಈ ಬಗ್ಗೆ ಕ್ಷಮಾಪಣೆ ಕೇಳಬೇಕು ಎಂದು ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್ ಆಗ್ರಹಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/12/2024 08:02 pm