ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಿ.ಟಿ ರವಿ ಕೇಸ್‌ ಮುಂದುವರೆಸುವುದರಲ್ಲಿ ಅರ್ಥವಿಲ್ಲ - ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಸಿಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ. ದೇಶದಲ್ಲಿ ಇಂಥ ಘಟನೆಗಳು ಹೊಸದಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಈಗಲೂ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನವಶ್ಯಕ ಎಂದರು.

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿ.ಟಿ ರವಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಖಾನಾಪುರದಿಂದ ಶಿಫ್ಟ್ ಮಾಡಿದ್ದರು. ಯಾರ ನಿರ್ದೇಶನ ಮೇರೆಗೆ ಸಿ.ಟಿ ರವಿಯನ್ನು ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ನಂಗೆ ಗೊತ್ತಿಲ್ಲ. ಸಿ.ಟಿ ರವಿಯನ್ನು ರಾತ್ರಿಯೇ ಕೋರ್ಟ್‌ಗೆ ಹಾಜರು ಮಾಡುವಂತೆ‌ ನಾನು ಪೊಲೀಸರಿಗೆ ಹೇಳಿದ್ದೆ. ಬೆಳಗಾವಿ ‌ಪೊಲೀಸರು ಅಷ್ಟು ಮಾಡಿದ್ರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಸಿ.ಟಿ ರವಿ ಅವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಪೊಲೀಸರು ಅವರನ್ನು ರೌಂಡ್ಸ್‌ ಹೊಡಿಸಿದ್ದಾರೆ. ಇದರಲ್ಲಿ ಬೇರೆ ಯಾವ ಉದ್ದೇಶ ಇಲ್ಲ. ಈ ಪ್ರಕರಣ ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಏಕೆಂದರೆ ಅವರು ಅವಾಚ್ಯ ಶಬ್ದ ಬಳಸಿಲ್ಲವೆಂದು ಹೇಳುತ್ತಿದ್ದಾರೆ. ಹೀಗಾಗಿ ಈ ಕೇಸ್‌ ಇಲ್ಲಿಗೆ ಮುಗಿಸಿದರೆ ಒಳ್ಳೆಯದು. ಬೆಳಗಾವಿ ಸುವರ್ಣ ವಿಧಾನಸೌಧಲ್ಲಿ ಇಂತಹ ಪ್ರಕರಣ ಈ ಹಿಂದೆ ಆಗಿರಲ್ಲಿಲ್ಲ ಎಂದರು.

Edited By : Nagesh Gaonkar
PublicNext

PublicNext

21/12/2024 08:13 pm

Cinque Terre

23.37 K

Cinque Terre

0

ಸಂಬಂಧಿತ ಸುದ್ದಿ