ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ನಿರ್ಮಾಣಕ್ಕೆ ಸ್ವಂತ ಜಮೀನನ್ನೇ ಅಡ ಇಟ್ಟ ಗ್ರಾಪಂ ಉಪಾಧ್ಯಕ್ಷ!

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕಟ್ಟಡ ನಿರ್ಮಾಣಕ್ಕಾಗಿ ಸ್ವಂತ ಜಮೀನನ್ನೇ ಅಡ ಇಟ್ಟು ಕಟ್ಟಡವನ್ನು ನಿರ್ಮಾಣ ಮಾಡಲಾಗಿದ್ದು, ಈಗ ಉದ್ಘಾಟನೆಗೆ ಸಿದ್ಧವಾಗಿದೆ.

ಹೌದು.. ತಗಡೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಹಾಗೂ ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗುರುಮಲ್ಲೇಶ್ ರವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದು, ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ.

2022-23ನೇ ಸಾಲಿನಲ್ಲಿ ಶಾಸಕರು ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಯೋಜನೆಯಲ್ಲಿ ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ 20 ಲಕ್ಷ ರೂ. ಅನುದಾನವನ್ನು ಹಾಗೂ ಅಪೆಕ್ಸ್ ಬ್ಯಾಂಕಿನ ವತಿಯಿಂದ 10 ಲಕ್ಷ ರೂ‌.ಗಳನ್ನು ಕಟ್ಟಡ ನಿರ್ಮಾಣಕ್ಕಾಗಿ ಮಂಜೂರು ಮಾಡಲಾಗಿತ್ತು.

ಆದರೆ, ಈ ಅನುದಾನ ಕೊರತೆಯಾದ ಕಾರಣ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗುತ್ತದೆ ಎಂದು ಮನಗಂಡ ಸಹಕಾರ ಸಂಘದ ಅಧ್ಯಕ್ಷ ಗುರುಮಲ್ಲೇಶ್ ರವರು, ಸಹಕಾರ ಸಂಘದ ಸದಸ್ಯರ ಜೊತೆ ಚರ್ಚಿಸಿ, ಸಂಘದ ಅಸ್ತಿತ್ವವನ್ನು ಉಳಿಸಿಕೊಳ್ಳಲು ತನ್ನ 3 ಎಕರೆ 10 ಗುಂಟೆ ಜಮೀನನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕ್ ರವರಿಗೆ ಸುಮಾರು 20 ಲಕ್ಷ ರೂ. ಹಣಕ್ಕೆ ಅಡ ಇಟ್ಟು ಕಟ್ಟಡ ನಿರ್ಮಾಣಕ್ಕೆ ಮುಂದಾಗಿ, ಸುಸಜ್ಜಿತವಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ನಿರ್ಮಾಣ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗುರುಮಲ್ಲೇಶ್ ರವರ ಕಾರ್ಯಕ್ಕೆ ತಗಡೂರು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಡಿ.23 ರಂದು ಸೋಮವಾರ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನೀಲ್ ಬೋಸ್, ಮಾಜಿ ಜಿಪಂ ಸದಸ್ಯ ಹಾಗೂ ಚಾಮರಾಜನಗರ ಮೈಸೂರು ಜಿಲ್ಲಾ ಕೇಂದ್ರ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಸೇರಿದಂತೆ ಹಲವು ಗಣ್ಯರು ಉದ್ಘಾಟನೆ ಮಾಡಲಿದ್ದಾರೆ.

Edited By : Vinayak Patil
Kshetra Samachara

Kshetra Samachara

21/12/2024 09:06 pm

Cinque Terre

1.18 K

Cinque Terre

0