ಅಥಣಿ: ಪತಿ ಜಮೀನಿನ ಕೆಲಸಕ್ಕೆ ಹೋಗಿದ್ರು, ಮಕ್ಕಳು ಶಾಲೆಗೆ ಹೋಗಿದ್ರು. ಈ ವೇಳೆಯಲ್ಲಿ ತುಂಬು ಗರ್ಭಿಣಿಯೊಬ್ಬರು ಮನೆಯಲ್ಲಿ ಇದ್ರು. ಈ ನಡುವೆ ನಡೆಯಬಾರದ ಘಟನೆಯೊಂದು ನಡೆದಿದೆ. ಮನೆಯಲ್ಲಿ ರಕ್ತ ಹರಿದಿದ್ದು, ಇಡೀ ಕುಟುಂಬ ಕಣ್ಣೀರಲ್ಲಿ ಮುಳುಗಿದೆ. ಅಲ್ಲಿ ಆಗಿದ್ದೇನು ತಿಳಿಯೋಣ ಬನ್ನಿ...
ಇನ್ನೇನು 15 ದಿನಗಳಲ್ಲಿ ಮಹಿಳೆಗೆ ಹೆರಿಗೆ ಆಗಬೇಕಿತ್ತು. ಆದರೆ, ಆಗಿದ್ದು ಮಾತ್ರ ರಕ್ತಪಾತ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ್ ಗ್ರಾಮದಲ್ಲಿ ನಡೆದ ಭೀಕರ ಘಟನೆ ಇದು. 9 ತಿಂಗಳ ತುಂಬು ಗರ್ಭಿಣಿಯಾಗಿದ್ದ ಸುವರ್ಣ ಮಾಂತಯ್ಯ ಮಠಪತಿ(33) ಅವರ ಕೊಲೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹರಿತವಾದ ಆಯುಧದಿಂದ ಸುವರ್ಣ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಹಾರೋಗೆರಿಯ ಆಸ್ಪತ್ರೆಗೆ ದಾಖಲು ಮಾಡಿದ್ರು. ಬಳಿಕ ಚಿಕಿತ್ಸೆ ಫಲಿಸದೇ ಮಹಿಳೆ ಅಲ್ಲಿಯೇ ಮೃತಪಟ್ಟಿದ್ದಾರೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು.
ಮೃತರಿಗೆ ನಾಲ್ವರು ಹೆಣ್ಣು ಮಕ್ಕಳು ಇದ್ದಾರೆ. ಮಹಿಳೆ ಐದನೇ ಮಗುವಿನ ನಿರೀಕ್ಷೆಯಲ್ಲಿ ಇದ್ದ ಸಂದರ್ಭದಲ್ಲಿ ದಾರುಣ ಘಟನೆ ನಡೆದಿದೆ. ಇಡೀ ಗ್ರಾಮವೇ ಆಘಾತಕ್ಕೆ ಒಳಗಾಗಿದೆ. ಪತಿ- ಪತ್ನಿ ನಡುವೆ ಯಾವುದೇ ಜಗಳ ಇರಲಿಲ್ಲ.
ಸುವರ್ಣ ಮಠಪತಿ ಕೊಲೆ ಪ್ರಕರಣ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ಎಲ್ಲಾ ಹಂತಗಳಲ್ಲಿ ತನಿಖೆ ಆರಂಭ ಮಾಡಿದ್ದು, ಶೀಘ್ರ ಹಂತಕರನ್ನು ಬಂಧಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.
-ಲಕ್ಷ್ಮಣ ಕೋಳಿ, ಪಬ್ಲಿಕ್ ನೆಕ್ಸ್ಟ್ ಚಿಕ್ಕೋಡಿ
PublicNext
21/12/2024 10:22 pm