ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಕಾರು, ಲಾರಿ ಮುಖಾಮುಖಿ ಡಿಕ್ಕಿ- ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು!

ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರು- ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿ ಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣ ಸಮೀಪ ಕೊಳ್ಳೇಗಾಲ ರಸ್ತೆ ನಾಗೇಗೌಡನದೊಡ್ಡಿ ಗೇಟ್ ಬಳಿ ಸಂಭವಿಸಿದೆ.

ಶನಿವಾರ ಬೆಳಿಗ್ಗೆ 11.30ರ ಸಮಯದಲ್ಲಿ ಅಪಘಾತ ಘಟಿಸಿದ್ದು, ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಡಿಕ್ಕಿಯ ರಭಸಕ್ಕೆ ಕಾರು ಛಿದ್ರಗೊಂಡು ಕಾರಿನ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಮೃತದೇಹಗಳು ರಸ್ತೆ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.

ಮೃತರನ್ನು 21ರಿಂದ 24 ವರ್ಷ ವಯಸ್ಸಿನ ದರ್ಶನ್, ವಿಕಾಸ್ ಹಾಗೂ ಶಶಾಂಕ್ ಎಂದು ಗುರುತಿಸಲಾಗಿದ್ದು‌, ತೀವ್ರವಾಗಿ ಗಾಯಗೊಂಡಿರುವ ಹೃತಿಕ್ ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಮೃತಪಟ್ಟವರೆಲ್ಲ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನವರಾಗಿದ್ದು, ಬೆಂಗಳೂರಿನ ಬಿಇಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಗಳು ಎನ್ನಲಾಗಿದೆ. ಮೃತರ ಶವಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

Edited By : Vinayak Patil
Kshetra Samachara

Kshetra Samachara

22/12/2024 09:16 am

Cinque Terre

860

Cinque Terre

0