ಸಿದ್ದಾಪುರ: ಪಟ್ಟಣದ ಹಾಳದಕಟ್ಟಾ ಸರಕಾರಿ ಶಾಲೆಯ ಸುತ್ತಮುತ್ತ ಹಾಗೂ ವಾಜಪೇಯಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು ಸಂಭಂದಪಟ್ಟವರು ಕೂಡಲೇ ಕ್ರಮ ಕೈಗೊಳ್ಳುವಂತೆ ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.
ಪಟ್ಟಣದ ಜನತಾ ಕಾಲೋನಿ, ಎಲ್ ಬಿ ನಗರ, ಮೀನು ಮಾರುಕಟ್ಟೆ ಸೇರಿದಂತೆ ಹಲವು ಕಡೆಗಳಲ್ಲಿ ಇದೇ ರೀತಿ ಸಮಸ್ಯೆ ಇದ್ದು ಅದರಲ್ಲೂ ಹಾಳದಕಟ್ಟಾ ಸರಕಾರಿ ಶಾಲೆಯ ಸುತ್ತಮುತ್ತ ವಾಜಪೇಯಿ ನಗರದಲ್ಲಿ ಬೀದಿ ನಾಯಿಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಪ್ರತಿನಿತ್ಯ ಅಂಗನವಾಡಿ, ಎಲ್.ಕೆ.ಜಿ ಯಿಂದ ಪ್ರೌಢಶಾಲೆಯವರೆಗಿನ ಸರಿ ಸುಮಾರು 600 ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಶಾಲೆಗೆ ಬರುತ್ತಿದ್ದು ಮಕ್ಕಳು ಭಯ ಭೀತಿಯಿಂದ ಶಾಲೆಗೆ ಬರುವಂಥಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೀದಿ ನಾಯಿಗಳಿಂದ ಶಾಲಾ ಮಕ್ಕಳು, ಬೈಕ್ ಸವಾರರಿಗೆ ತೊಂದರೆ ಉಂಟಾಗುತ್ತಿದ್ದು ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಅಲ್ಲದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆತಂಕ ವ್ಯಕ್ತಪಡಿಸುತ್ತಿದ್ದಾರೆ
ತಾಲೂಕಿನಲ್ಲಿ ಕಳೆದ ಮೂರು ತಿಂಗಳಿಂದ ಈವರೆಗೆ 316 ಜನರು ನಾಯಿ ಕಡಿತಕ್ಕೆ ಒಳಗಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 268 ಹಾಗೂ ಪಟ್ಟಣದಲ್ಲಿ 50 ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಮತ್ತೆ ಇಂಥಹ ಘಟನೆಗಳು ನಡೆಯದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ತಿಳಿಸಿದ್ದಾರೆ.
ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಛೇರಿಗೆ ಹಾಗೂ ಪಟ್ಟಣ ಪಂಚಾಯತಗೆ ಮನವಿ ಸಲ್ಲಿಸಿದ್ದು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಇಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವ ಸಂದರ್ಭದಲ್ಲಿಯಾದರು ಬೀದಿನಾಯಿಗಳಿಂದ ಅಪಾಯವಿದ್ದು ಕೂಡಲೇ ಕ್ರಮವಹಿಸಬೇಕೆಂದು ಪಟ್ಟಣ ಪಂಚಾಯತ್ ಸದಸ್ಯ ನಂದನ ಬೋರ್ಕರ್ ಒತ್ತಾಯ ಮಾಡಿದ್ದಾರೆ.
Kshetra Samachara
22/12/2024 11:09 am