ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಡೀ ಜಗತ್ತನ್ನೇ ಗೆದ್ದಂತೆ ಕಾಂಗ್ರೆಸ್ ವರ್ತಿಸುತ್ತಿದೆ - ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೆ ಗೆದ್ದ ವರ್ತನೆ ತೋರುತ್ತಿದೆ. ರಾಹುಲ್ ಗಾಂಧಿ ತಮ್ಮ ಸೋಲನ್ನು ಮತೆಮಾಚಲು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನೆಹರು ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅತ್ಯಂತ ಘೋರ ಅಪಮಾನ ಮಾಡಿದ್ದಾರೆ. ಅಂಬೇಡ್ಕರ್ ರಾಜಿನಾಮೆಯಿಂದ ಏನು ಫರಕ್ ಬಿಳಲ್ಲ ಅಂತ ಪತ್ರ ಬರೆದಿದ್ದಾರೆ ಎಂದು ಟೀಕೆ ಮಾಡಿದರು.

ನೆಹರು ಭಾರತ ರತ್ನ, ಇಂದಿರಾಗಾಂಧಿ ಭಾರತ ರತ್ನ, ರಾಜೀವ ಗಾಂಧಿ ಭಾರತರತ್ನ ತಮಗೆ ತಾವೇ ಕೊಟ್ಟುಕೊಂಡರು. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲು ಬಿಜೆಪಿ ಬೆಂಬಲಿತ ಕಾಂಗ್ರೆಸ್ ಅಲ್ಲದ ಪಕ್ಷ ಬರಬೇಕಾಯಿತು. ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಸುಧೀರ್ಘ ಭಾಷಣ ಮಾಡಿದ್ದಾರೆ. ನೆಹರು ಅವರು ಮೀಸಲಾತಿ ಬಗ್ಗೆ ಕ್ವಾಲಿಟಿ ಬಗ್ಗೆ ಮಾತನಾಡಿದ್ದು ರೆಕಾರ್ಡ್ ಇದೆ. ಈ ವಿಚಾರವಾಗಿ ಕರ್ನಾಟಕದಲ್ಲಿ ಸದನದಲ್ಲಿ ಗಲಾಟೆ ಮಾಡಿ. ಸಿಟಿ ರವಿ ಅವರನ್ನು ಹತ್ತಿಕ್ಕಲು ಪ್ರಯತ್ನ ಮಾಡಲಾಗಿದೆ ಎಂದರು.

ಅಧಿಕಾರಿಗಳಿಗೆ ಒಂದು ಮಾತು ಸರ್ಕಾರಗಳು ಬದಲಾಗುತ್ತವೆ. ವಾಟ್ ಬ್ಲೆಡಿ ಡಿಡ್ ಮಿಸ್ಟರ್ ಕಮಿಷನರ್. ಬಾಲಿಶ ಹೇಳಿಕೆ ನೀಡತ್ತಿರಿ. ಅಧಿಕಾರಿಗಳು ಕಾನೂನು ಬಾಹಿರ ಅಧಿಕಾರ ಬಳಸುತ್ತಿದ್ದಾರೆ. ನಾವು ಕಾನೂನು ಹೋರಾಟ ಮಾಡತ್ತೆವೆ. ಸಿಟಿ ರವಿಗೆ ನಮ್ಮ ಪಕ್ಷ ಎಲ್ಲಾ ಸಹಾಯ ಮಾಡುತ್ತದೆ. ಅಧಿಕಾರ ವರ್ತನೆ ತೀವ್ರವಾಗಿ‌ ಖಂಡನೆ ಮಾಡತ್ತೆನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/12/2024 01:07 pm

Cinque Terre

95.38 K

Cinque Terre

2

ಸಂಬಂಧಿತ ಸುದ್ದಿ