This is a modal window.
Beginning of dialog window. Escape will cancel and close the window.
End of dialog window.
ಕಾಸರಗೋಡು: ಶನಿವಾರ ತಡರಾತ್ರಿ ನಡೆದ ಭಾರೀ ಅಗ್ನಿ ಅವಘಡಕ್ಕೆ ಐದು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ಕಾಸರಗೋಡಿನ ಪೆರ್ಲದ ಬಳಿ ನಡೆದಿದೆ.
ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ, ಗೋಪಿನಾಥ್ ಪೈ ಕ್ಲಾತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಅಗ್ನಿಗಾಹುತಿ ಆಗಿದೆ.
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಮೂರು ಗಂಟೆಗೂ ಅಧಿಕ ಸಮಯದ ಬಳಿಕ ಬೆಂಕಿಯನ್ನು ನಂದಿಸಲಾಯಿತು. ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯನ್ನು ನಂದಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
Kshetra Samachara
22/12/2024 01:30 pm