ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿಲ್ಯಾಕ್ಸ್ ಆಗಿ 'ಪುಷ್ಪ 2' ಸಿನಿಮಾ ನೋಡುತ್ತಿದ್ದ ಸ್ಮಗ್ಲರ್‌ಗಳ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿನ ಮಲ್ಟಿಪ್ಲೆಕ್ಸ್‌ವೊಂದರಲ್ಲಿ 'ಪುಷ್ಪ 2' ಸಿನಿಮಾ ವೀಕ್ಷಿಸುತ್ತಿದ್ದ ಕೊಲೆ ಮತ್ತು ಮಾದಕವಸ್ತು ಪ್ರಕರಣಗಳಲ್ಲಿ ಬೇಕಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರಮಂದಿರದಲ್ಲೇ ಪೊಲೀಸರು ಈ ಆರೋಪಿಯನ್ನು ಬಂಧಿಸಿರುವುದು ಇತರ ಪ್ರೇಕ್ಷಕರಿಗೆ ದಿಗ್ಭ್ರಮೆ ಉಂಟುಮಾಡಿದೆ. ಚಿತ್ರಮಂದಿರದೊಳಗೆ ನುಗ್ಗಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಕರೆದೊಯ್ದ ಬಳಿಕ ಪ್ರೇಕ್ಷಕರು ಸಿನಿಮಾ ವೀಕ್ಷಿಸುವುದನ್ನು ಮುಂದುವರಿಸಬಹುದು ಎಂದು ಭರವಸೆ ನೀಡಿದರು.

ಮೆಶ್ರಾಮ್ 10 ತಿಂಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಆದರೆ, ಇತ್ತೀಚೆಗಷ್ಟೇ ಬಿಡುಗಡೆಯಾದ ಪುಷ್ಪ 2 ಸಿನಿಮಾ ವೀಕ್ಷಿಸಲು ಆತ ಉತ್ಸುಕನಾಗಿರುವ ಬಗ್ಗೆ ಮಾಹಿತಿ ತಿಳಿದಿದ್ದ ಪೊಲೀಸರು ಚಿತ್ರಮಂದಿರದಲ್ಲೇ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪಚ್‌ಪೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಆರೋಪಿ ವಿರುದ್ಧ ಎರಡು ಕೊಲೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ 27 ಪ್ರಕರಣಗಳಿವೆ. ಆತ ಹಿಂಸಾತ್ಮಕ ಪ್ರವೃತ್ತಿಗೆ ಹೆಸರುವಾಸಿಯಾಗಿದ್ದ. ಈ ಹಿಂದೆ ಪೊಲೀಸರ ಮೇಲೆ ದಾಳಿ ನಡೆಸಿದ್ದನು ಎಂದು ಅವರು ಹೇಳಿದರು.

Edited By : Nagaraj Tulugeri
PublicNext

PublicNext

22/12/2024 01:34 pm

Cinque Terre

22.27 K

Cinque Terre

0