ಶ್ರೀನಿವಾಸಪುರ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಸಂಸತ್ತಿನಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಸಂಪುಟದಿಂದ ವಜಾ ಗೊಳಿಸಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ದಲಿತ ಹಕ್ಕುಗಳ ಸಮಿತಿ ಮುಖಂಡ ಪಾತಕೋಟೆ ಶ್ರೀನಿವಾಸ್ ಆಗ್ರಹಿಸಿದರು.
ಪಟ್ಟಣದ ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ, ದಲಿತ ಹಕ್ಕುಗಳ ಸಮಿತಿ ಮುಖಂಡ ಪಾತಕೋಟೆ ಶ್ರೀನಿವಾಸ್, ದೇಶಕ್ಕೆ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ. ಸಂವಿಧಾನದಿಂದಲೇ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿರುವುದು ಅಮಿತ್ ಶಾ ಗೃಹ ಸಚಿವರಾಗಿರುವುದು ಇಲ್ಲದಿದ್ದರೆ ನರೇಂದ್ರ ಮೋದಿ ಟಿ ವ್ಯಾಪಾರ ಮಾಡಿಕೊಂಡು ಇರಬೇಕಿತ್ತು ಎಂದರು.
ದೇಶದ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಅಂಬೇಡ್ಕರ್ ರವರನ್ನು ನೆನೆಯುವುದನ್ನು ಒಂದು ಪ್ಯಾಶನ್ ಆಗಿದೆ ಎಂದು ಹೇಳಿಕೆ ಅತ್ಯಂತ ನೋವಿನ ಸಂಗತಿ ಇಂತಹ ಕ್ರೂರ ಮನಸ್ಥಿತಿಯ ವ್ಯಕ್ತಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
Kshetra Samachara
22/12/2024 01:56 pm