ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಅದ್ಧೂರಿಯಾಗಿ ನಡೆದ ಶ್ರೀರಂಗನಾಥ ಸ್ವಾಮಿಯ ರಥೋತ್ಸವ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದುಗ್ಗವರ ಗ್ರಾಮದಲ್ಲಿ ಶ್ರೀರಂಗನಾಥ ಸ್ವಾಮಿಯ ಕಾರ್ತಿಕೋತ್ಸವದ ಅಂಗವಾಗಿ ಶ್ರೀರಂಗನಾಥ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಶ್ರೀ ರಂಗನಾಥ ಸ್ವಾಮಿಯ ರಥೋತ್ಸವವನ್ನು ಬಗೆ ಬಗೆ ಹೂಗಳಿಂದ ಅಲಂಕಾರ ಮಾಡಿದ್ದು ಗ್ರಾಮಸ್ಥರು ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದ್ದಾರೆ. ದುಗ್ಗವರ ಗ್ರಾಮದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವಂತಹ ಶ್ರೀ ರಂಗನಾಥ ಸ್ವಾಮಿ ರಥೋತ್ಸವಕ್ಕೆ ವಿವಿಧ ವಾದ್ಯಗಳ ಮೂಲಕ ರಂಗನಾಥ ಸ್ವಾಮಿ ರಥದ ಮುಂದೆ ಸಂಭ್ರಮಿಸಿದ್ದಾರೆ‌.

ಬೆಳಗಿನಿಂದಲೇ ಗ್ರಾಮದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಿ ಗ್ರಾಮದ ಪ್ರಮುಖ ಬೀದಿಯಲ್ಲಿ ಶ್ರೀರಂಗನಾಥ ಸ್ವಾಮಿಯ ರಥವನ್ನು ಎಳೆದು ಭಕ್ತರು ತಮ್ಮ ಭಕ್ತಿಯಲ್ಲ ಸಮರ್ಪಿಸಿದ್ದಾರೆ.

Edited By : Nagesh Gaonkar
PublicNext

PublicNext

22/12/2024 03:17 pm

Cinque Terre

11.64 K

Cinque Terre

0

ಸಂಬಂಧಿತ ಸುದ್ದಿ