ಚಿತ್ರದುರ್ಗದಲ್ಲಿ ವಾಲ್ಮೀಕಿ ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ & ಸಾಂಸ್ಕೃತಿಕ ಸಂಘದಿಂದ, ಜಿಲ್ಲಾ ಮಟ್ಟದ ವಾಲ್ಮೀಕಿ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ತರಾಸು ರಂಗಮಂದಿರದಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಸಂಸದ ಗೋವಿಂದ ಕಾರಜೋಳ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಚಿತ್ರದುರ್ಗ ಜಿಲ್ಲೆಯಲ್ಲಿ ಜನಪರ ಸುದ್ದಿಗಳ ಮೂಲಕ ಗಮನ ಸೆಳೆದಿರುವ, ನಮ್ಮ ಬಿಟಿವಿ ಕನ್ನಡ ಸುದ್ದಿ ವಾಹನಿಯ ಜಿಲ್ಲಾ ವರದಿಗಾರ ರಾಜಶೇಖರ್ ಅವರಿಗೆ, ಸಮಾಜದ ಹೆಮ್ಮೆಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂಧರ್ಭದಲ್ಲಿ ಖ್ಯಾತ ನ್ಯಾಯವಾದಿ HMS ನಾಯಕ, ಕಿಲಾರಿ ಜೋಗಯ್ಯ, ಮಂಜುಳ ಸೇರಿದಂತೆ ಹಲವು ಗಣ್ಯರಿಗೆ ಸನ್ಮಾನಿಲಾಯಿತು. ನಂತ್ರ ಒಟ್ಟು 135 ಮಂದಿ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೂ ಕೂಡಾ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀಂದ್ರ ಪಪ್ಪಿ, ಸಂಸದ ಗೋವಿಂದ ಕಾರಜೋಳ, ಅಧ್ಯಕ್ಷರಾದ ಡಾ. ಎಚ್.ಗುಡ್ಡದೇಶ್ವರಪ್ಪ , ಎಸ್.ಸಂದೀಪ್ ಸೇರಿ ನೂರಾರು ಮಂದಿ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಗಣ್ಯರು ಭಾಗಿಯಾಗಲಿದ್ದರು.
Kshetra Samachara
22/12/2024 03:35 pm