ಬೆಳಗಾವಿ: ಬೆಳಗಾವಿಯ ಕುಲಕರ್ಣಿ ಗಲ್ಲಿಯಲ್ಲಿರುವ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಆದರೆ ಮನೆಯೊಳಗೆ ಏಳು ಸಿಲಿಂಡರ್ ಇರುವ ಬಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ನಗರದ ಕುಲಕರ್ಣಿ ಗಲ್ಲಿಯ ಶಶಿಕಲಾ ಅಂಕಲಿ( 58) ಎಂಬುವರಿಗೆ ಸೇರಿದ ಮನೆಯಲ್ಲಿ ಅಡುಗೆ ಮಾಡುವಾಗ ಕಿಡಿಬಿದ್ದು ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ವೃದ್ಧೆ ಪ್ರಾಣಾಯದಿಂದ ಪಾರಾಗಿದ್ದಾರೆ. ನಿರಂತರವಾಗಿ ಮನೆ ನಂದಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
22/12/2024 04:09 pm