ಸುರತ್ಕಲ್: ಖಾಸಗಿ ಬಸ್ - ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಸಾವನ್ನಪ್ಪಿದ ಘಟನೆ ಕಾನ ಜಂಕ್ಷನ್ ಬಳಿ ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ನಡೆದಿದೆ.
ಕಾನ ಪದವು ನಿವಾಸಿ ರೆಮಿ ನೋಯಲ್ ಡಿಸೋಜ (49) ಮೃತ ಬೈಕ್ ಸವಾರ. ಬಸ್ ಡಿಕ್ಕಿ ಹೊಡೆದ ಪರಿಣಾಮ ರೆಮಿ ನೋಯಲ್ ಕಾಂಕ್ರೀಟ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಬಸ್ ಚೊಕ್ಕಬೆಟ್ಟು ಕಡೆಯಿಂದ ಬರುತ್ತಿದ್ದು ರೆಮಿ ಡಿಸೋಜ ಅವರು ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದರು. ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
22/12/2024 04:43 pm