ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಎರಡು ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ - ಮೂವರು ಕಳ್ಳಿಯರು ಅರೆಸ್ಟ್

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದಾ ಬಂಧಿತ ಕಳ್ಳಿಯರು. ಗೋಳ್ತಮಜಲು ಗ್ರಾಮದ ನಿವಾಸಿ ಸರಸ್ವತಿ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಇವರು ಕಳವುಗೈದಿದ್ದರು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ಆರೋಪಿತೆಯಿಬ್ಬರನ್ನು ದಸ್ತಗಿರಿ ಮಾಡಿದ ಪೊಲೀಸರು ಅವರಿಂದ ಕಳವಾದ 25,000 ರೂ. ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.

ಮತ್ತೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್‌ಗೆ ಮಂಗಳೂರಿನ ನೀರುಮಾರ್ಗ ನಿವಾಸಿ ವಿದ್ಯಾ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದಿದ್ದಳು. ಈ ವೇಳೆ ಆಕೆ 77000ರೂ. ಮೌಲ್ಯದ 9ಗ್ರಾಂ ತೂಕದ 3ಚಿನ್ನದ ಉಂಗುರಗಳನ್ನು ಕಳವು ಮಾಡಿದ್ದಳು. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಈಕೆಯನ್ನು ಬಂಧಿಸಿದ್ದಾರೆ. ಬಂಧಿತೆಯಿಂದ ಕಳವಾದ ಒಟ್ಟು 77000 ರೂ ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

Edited By : Vijay Kumar
Kshetra Samachara

Kshetra Samachara

22/12/2024 06:31 pm

Cinque Terre

2.13 K

Cinque Terre

0

ಸಂಬಂಧಿತ ಸುದ್ದಿ