ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆತ ಎಂತಹ ಮನುಷ್ಯ..? - ಅಲ್ಲು ಅರ್ಜುನ್ ವಿರುದ್ಧ ತೆಲಂಗಾಣ ಸಿಎಂ ಗರಂ

ಅಮರಾವತಿ: ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಿನಿಮಾ ಬಿಡುಗಡೆ ಸಮಯ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ವಿರುದ್ಧ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಶನಿವಾರ AIMIM ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

'ಕಾರ್ಯಕ್ರಮದ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ನಂತರವು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಲವಂತವಾಗಿ ಹೊರಗೆ ಕಳುಹಿಸುವವರೆಗೂ ಚಿತ್ರಮಂದಿರದಿಂದ ಹೊರಬರಲಿಲ್ಲ. ಅಲ್ಲು ಅರ್ಜುನ್ ದೊಡ್ಡ ಜನಸ್ತೋಮವಿದ್ದರೂ ರೋಡ್‌ಶೋ ನಡೆಸಿ ಜನರತ್ತ ಕೈ ಬೀಸಿದ್ದು ಗೊಂದಲಕ್ಕೆ ಕಾರಣವಾಯಿತು' ಎಂದು ಆರೋಪಿಸಿದ್ದಾರೆ. ಜೊತೆಗೆ ನಾನು ಜನಸಾಮಾನ್ಯರ ಪರ ನಿಲ್ಲತ್ತೇನೆ, ಯಾವ ಒತ್ತಡಕ್ಕೂ ಮಣಿಯಲ್ಲ ಎಂದು ಹೇಳಿದರು.

Edited By : Vijay Kumar
PublicNext

PublicNext

22/12/2024 10:17 pm

Cinque Terre

31.65 K

Cinque Terre

1