ಧಾರವಾಡ: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿಗೀಡಾಗಿ ಐದು ಜನ ಗಾಯಗೊಂಡಿರುವ ಘಟನೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಅರುಣ್ ಸಿಂಗ್ ಎಂಬ ಯುವಕ ಈ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ. ಇನ್ನುಳಿದ ಐದು ಜನರಿಗೆ ಗಾಯಗಳಾಗಿವೆ. ಐದು ಜನರ ಪೈಕಿ ಮತ್ತೊಬ್ಬನಿಗೆ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳಿಗೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರವಾರದಿಂದ ಮದುವೆ ಮುಗಿಸಿ ವಾಪಸ್ ಧಾರವಾಡದತ್ತ ಬರುತ್ತಿದ್ದ ಸಂದರ್ಭದಲ್ಲಿ ಕಾರು ಹಿರೇಹೊನ್ನಳ್ಳಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಧಾರವಾಡದ ಅರುಣ್ ಸಿಂಗ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಕಲಘಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
23/12/2024 09:43 am