ಚಿಕ್ಕಮಗಳೂರು: ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೋ ಟ್ರಾವಲರ್ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆಯಿಂದ ಹೊರನಾಡಿಗೆ ಸಾಗುವ ರಸ್ತೆಯೂ ತಿರುವುಗಳಿಂದ ಕೂಡಿದ್ದು ಪದೇ ಪದೇ ಪ್ರವಾಸಿಗರ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ.
PublicNext
23/12/2024 11:20 am