ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳೆನರಸೀಪುರ: ತವರು ಜಿಲ್ಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಟೆಂಪಲ್ ರನ್

ಹೊಳೆನರಸೀಪುರ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ತವರು ಜಿಲ್ಲೆಗೆ ಆಗಮಿಸಿದ್ದು, ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮನೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಯಲಿಗೂರು ಗ್ರಾಮದಲ್ಲಿರುವ ದೇವೀರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಚೆನ್ನಮ್ಮ, ಪುತ್ರ, ಸೊಸೆ, ಮೊಮ್ಮಗನ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಇದೇ ವೇಳೆ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಶಾಸಕ ಸಿ.ಎನ್ ಬಾಲಕೃಷ್ಣ ಜೊತೆಯಾಗಿದ್ದಾರೆ. ಹೆಚ್‌ಡಿಕೆ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ ರೇವಣ್ಣ, ಪತ್ನಿ ಭವಾನಿ ರೇವಣ್ಣ, ಪುತ್ರರಾದ ಸೂರಜ್, ಪ್ರಜ್ವಲ್ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಸಂಕಷ್ಟಗಳು ದೂರಾಗಲೆಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

Edited By : Suman K
PublicNext

PublicNext

23/12/2024 01:18 pm

Cinque Terre

26.29 K

Cinque Terre

0

ಸಂಬಂಧಿತ ಸುದ್ದಿ