ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಮಾಜಿ ಸಚಿವ ಸಿಟಿ ರವಿ ಪ್ರಕರಣ.. ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕೆ ವಾಗ್ದಾಳಿ

ಹೊಳೆನರಸೀಪುರ : ರಾಜ್ಯದಲ್ಲಿ ಈ ಸರ್ಕಾರ ಬಂದ ನಂತರ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ರೀತಿ ಹೋಗಬಹುದು ಅನ್ನುವುದಕ್ಕೆ ವೇದಿಕೆ ಸಿದ್ದ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾಜಿ ಸಚಿವ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಏನೇನು ನಡೆಯುತ್ತಿದೆ ಎಂದು ಗಮನಿಸಿದ್ದೇನೆ, ಒಂದು ದುರಾದೃಷ್ಟ ಎಂದರೆ ಕರ್ನಾಟಕದ ಪೊಲೀಸ್ ಇಲಾಖೆ ದೇಶದಲ್ಲೇ ವಿಶೇಷವಾದ ಗೌರವಯುತ ಸ್ಥಾನ ಇದೆ, ಕರ್ನಾಟಕ ಪೊಲೀಸ್ ದೇಶದಲ್ಲೇ ಉತ್ತಮ ಕೆಲಸ ಮಾಡುವ ಇಲಾಖೆ ಗೌರವ ಇತ್ತು,ಆ ಗೌರವವನ್ನು ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಸಂಪೂರ್ಣವಾಗಿ ಪೊಲೀಸ್ ಇಲಾಖೆ ದೂಷಿಸಲ್ಲ.ಇವತ್ತು ಸರ್ಕಾರದಲ್ಲಿರುವ ಮಂತ್ರಿಗಳು ಕೆಲವು ಆಯ್ದಂತಹ ಪೊಲೀಸ್ ಅಧಿಕಾರಿಗಳಿಗೆ ಡೈರೆಕ್ಷನ್ ಕೊಡುವ ಮೂಲಕ ಕಾನೂನು ಬಾಹಿರವಾದಂತಹ ತೀರ್ಮಾನಗಳಾಗುತ್ತಿವೆ,ಬೇಕಾದಂತೆ ಕೇಸ್‌ಗಳನ್ನು ಬುಕ್ ಮಾಡುತ್ತಿದ್ದಾರೆ,ಯಾವ ರೀತಿ ಅವರ ವಿರೋಧಿಗಳನ್ನು ಸದೆಬಡೆಯಬೇಕೆಂದು ಈ ರೀತಿಯ ದುರುಪಯೋಗ, ಕಾನೂನಿನ ಉಲ್ಲಂಘನೆ ಸರ್ಕಾರದಿಂದಲೇ ಆಗುತ್ತಿದೆ,ದೇವಸ್ಥಾನದಲ್ಲಿ ಪೂಜೆ ಮಾಡಿ ಬಂದು ನಿಂತಿದ್ದೇನೆ ಕಾಲವೇ ಇದಕ್ಕೆಲ್ಲ ಉತ್ತರ ಕೊಡುತ್ತೆ ಎಂದರು.

Edited By : Shivu K
PublicNext

PublicNext

23/12/2024 01:23 pm

Cinque Terre

23.29 K

Cinque Terre

0