ಹಾಸನ : ಲಾರಿ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಹಾಸನ ಅರಸೀಕೆರೆ ರಸ್ತೆಯ ದೊಡ್ಡಪುರದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತುರುವೇಕೆರೆ ಮೂಲದ ಓರ್ವ ವ್ಯಕ್ತಿ ಹಾಗೂ ಯಡಿಯೂರು ಮೂಲದ ಒಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
23/12/2024 01:42 pm