ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ವಿಭಾಗದ ಅಧಿಕಾರಿಗಳು ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಡಿ. 23ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮುರು ತಾಲ್ಲೂಕು ಕಚೇರಿಯಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.
ಅದೇ ದಿನ ಪೊಲೀಸ್ ಉಪಾಧೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.
ಡಿ. 24ರಂದು ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ, ಅನಾವಶ್ಯಕ ವಿಳಂಬ, ಇತ್ಯಾದಿ ವಿಷಯಗಳ ದೂರುಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗದಿತ ನಮೂನೆ-1 ಮತ್ತು 2 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
23/12/2024 03:31 pm