ಹುಬ್ಬಳ್ಳಿ : ಅದು ನಿಜಕ್ಕೂ ಸಾವಿನ ಹೆದ್ದಾರಿ. ಈ ಹೆದ್ದಾರಿಯಲ್ಲಿ ಅಪಘಾತಗಳ ಮೂಲಕ ಮರಣ ಮೃದಂಗ ಬಾರಿಸುತ್ತಲೇ ಇತ್ತು. ಈಗ ಈ ರಸ್ತೆಗೆ ಕಾಯಕಲ್ಪ ದೊರೆತಿದ್ದು, ಕಾಮಗಾರಿ ಭರದಿಂದ ಸಾಗಿದೆ. ಕೇಂದ್ರ ಸಚಿವರ ಮುತುವರ್ಜಿಯಿಂದ ಸುಗಮ ಸಂಚಾರಕ್ಕೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಸಾಕ್ಷಿಯಾಗಲಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ..
ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಧಾರವಾಡ ಜಿಲ್ಲೆಯಲ್ಲಿ ಹಾದು ಹೋಗಿರೋ ರಾಷ್ಟ್ರೀಯ ಹೆದ್ದಾರಿ 4 ಬೆಂಗಳೂರಿನಿಂದ ಪೂನಾಕ್ಕೆ ತಲುಪೋ ಈ ಹೆದ್ದಾರಿ ಹುಬ್ಬಳ್ಳಿ-ಧಾರವಾಡ ಎರಡಕ್ಕೂ ಹೊರಭಾಗದಲ್ಲಿ ಸಂಪರ್ಕ ಹೊಂದಿದೆ. ಇಂಥಹ ರಸ್ತೆ ಧಾರವಾಡದ ನರೇಂದ್ರ ಬೈಪಾಸ್ ನಿಂದ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ವರೆಗೆ ಕಿರಿದಾಗಿರೋದ್ರಿಂದಾಗಿ ಸಾವಿನ ರಸ್ತೆಯಾಗಿ ಪರಿಣಮಿಸಿತ್ತು.
ಈ ನಿಟ್ಟಿನಲ್ಲಿ ಅಪಘಾತ ಪ್ರಮಾಣ ತಗ್ಗಿಸುವ ಸದುದ್ದೇಶದಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಮುತುವರ್ಜಿ ವಹಿಸಿ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸಿದ್ದು, ಈಗ ಕಾಮಗಾರಿ ವೇಗ ಪಡೆದಿದ್ದು, ಜೂನ್ ಅಂತ್ಯದಲ್ಲಿ ಪ್ರಮುಖ ಕಾಮಗಾರಿ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಷಟ್ಪಥ ಎಕ್ಸ್‌ಪ್ರೆಸ್ ಹೈವೇ ಜೊತೆಗೆ ನಾಲ್ಕು ಪಥ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಒಟ್ಟು 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡಲಾಗುತ್ತಿದೆ. 2022 ಪೆಬ್ರವರಿ 28 ರಂದು ಕಾಮಗಾರಿಗೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಶಂಕುಸ್ಥಾಪನೆ ಮಾಡಿದ್ದರು. ಈಗಾಗಲೇ ಸುಮಾರು ಬಾರಿಗೆ ಕೇಂದ್ರ ಸಚಿವರು ಪರಿಶೀಲನೆ ನಡೆಸಿ ಕಾಮಗಾರಿ ಚುರುಕುಗೊಳಿಸಿದ್ದಾರೆ. ಅಲ್ಲದೇ ಸ್ಥಳೀಯ ನಿವಾಸಿಗಳಿಗೂ ಭರವಸೆ ನೀಡಿದ್ದಾರೆ.
ಒಟ್ಟಿನಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ನೇತೃತ್ವದಲ್ಲಿ ಸಾವಿನ ಹೆದ್ದಾರಿಯ ಎಂಬುವ ಅಪಕೀರ್ತಿ ಅಳಿಸುವ ಮೂಲಕ ಜನರಿಗೆ ಸುಗಮ ಸಂಚಾರದ ಭಾಗ್ಯ ದೊರೆಯಲಿದೆ.
ಮಲ್ಲೇಶ್ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
23/12/2024 03:45 pm