ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳು: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ: ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಶಾಸಕರುಗಳಾದ ಮಹೇಶ್ ಟೆಂಗಿನಕಾಯಿ, ಪ್ರಸಾದ್ ಅಬ್ಬಯ್ಯ ಮತ್ತು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ಹೇಳಿದರು.

ರವಿವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡು, 9 ಜನ ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ನಗರ ಉಣಕಲ್‌ನ ಅಚ್ಚಮ್ಮ ಕಾಲೋನಿಯಲ್ಲಿ ಈ ಪ್ರಕರಣ ನಡೆದಿದೆ. ಗಾಯಗೊಂಡ ಮಾಲಾಧಾರಿಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾತ್ರಿ ಪೂಜೆ ಮಾಡಿದ ಮಾಲಾಧಾರಿಗಳು, ಊಟ ಮುಗಿಸಿ ಮಲಗಿಕೊಂಡಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ ಅನಿಲ ಲೀಕ್ ಆಗಿದೆ. ದೇವರ ಮುಂದಿನ ದೀಪಕ್ಕೆ ಅನಿಲ ತಗುಲಿ, ಸಿಲಿಂಡರ್ ಸ್ಪೋಟಗೊಂಡಿದೆ. ಪರಿಣಾಮ 9 ಜನ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯವನ್ನು ಪ್ರಹ್ಲಾದ್ ಜೋಶಿ ವಿಚಾರಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.

ವಿನಾಯಕ್, ಪ್ರಕಾಶ್, ತೇಜಸ್ವರ್, ಶಂಕರ್ ಚವ್ಹಾಣ್, ಪ್ರವೀಣ್, ಮಂಜುನಾಥ್, ನಿಜಲಿಂಗಪ್ಪ, ರಾಜು, ಸಂಜಯ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ.‌ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಗಳ ಚಿಕಿತ್ಸೆಗಾಗಿ ವಿಶೇಷ ಮತ್ತು ಪ್ರತ್ಯೇಕ ಕೊಠಡಿ ತೆರೆಯಲಾಗಿದೆ. ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ, ಕಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು, ಎಲ್ಲ ಗಾಯಾಳುಗಳ ಚಿಕಿತ್ಸೆ ವೆಚ್ಚ ಸಂಪೂರ್ಣವಾಗಿ ಜಿಲ್ಲಾಡಳಿತ ಭರಿಸಲಿದೆ. ಗಾಯಾಳುಗಳ ಕುಟುಂಬಸ್ಥರಿಗೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದೆಂದರು.

ಸದ್ಯ 9 ಜನ ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಕೂಡಾ ತಮ್ಮ ಶಕ್ತಿ ಮೀರಿ ಚಿಕಿತ್ಸೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ವೈದ್ಯರು ಹೇಳುವ ಪ್ರಕಾರ ನಮ್ಮ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇವೆ ಇನ್ನುಳಿದಿದ್ದು ದೇವರಿಗೆ ಬಿಟ್ಟ ವಿಚಾರ ಅಂತಾ ಹೇಳಿದ್ದು ಅಯ್ಯಪ್ಪ ಸ್ವಾಮಿಯೇ ಇದೀಗ ತನ್ನ ಭಕ್ತರನ್ನು ಕಾಪಾಡಬೇಕಿದೆ.

ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/12/2024 04:35 pm

Cinque Terre

37.34 K

Cinque Terre

5

ಸಂಬಂಧಿತ ಸುದ್ದಿ