ಹೊಸದುರ್ಗ : ತಾಲ್ಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಬಿ.ಜಿ. ಗೋವಿಂದಪ್ಪ ನವರ ನೇತೃತ್ವದಲ್ಲಿ ಬಗರ್ ಹುಕುಂ ಅಕ್ರಮ ಸಕ್ರಮ ಸಭೆ ನಡೆಸಿ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಪತ್ರ ವಿತರಣೆ ಮಾಡಲು ಸಭೆ ನಡೆಸಿಸಿದರು.
ತಾಲ್ಲೂಕು ದಂಡಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಸಂಬಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿ ಮಾಹಿತಿ ಪಡೆದು ಅರ್ಜಿಗಳನ್ನು ಪರಿಶೀಲಿಸಲಾಯಿತು.
ಸಭೆಯಲ್ಲಿ ಪರಿಶೀಲನೆಗೊಂಡಿರುವ 44 ಅಜಿ೯ ವಿತರಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ತಿರುಪತಿ ಪಾಟೀಲ್. ತಾಲೂಕ್ ಅರಣ್ಯ ಇಲಾಖೆ ಅಧಿಕಾರಿಗಳಾದ ಸುನಿಲ್ ಕುಮಾರ್ ಸೇರಿದಂತೆ ಬಗರ್ ಹುಕುಂ ಕಮಿಟಿ ಸದಸ್ಯರಾದ ಮಲ್ಲಿಕಾರ್ಜುನ್. ಮಹೇಶ್ ಮಣ್ಣಮ್ಮ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು
Kshetra Samachara
23/12/2024 04:36 pm