ಹೈದರಾಬಾದ್: ಹೈದರಾಬಾದ್‌ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜುಬಿಲಿ ಹಿಲ್ಸ್ ನಿವಾಸದ ಮೇಲೆ ಕಲ್ಲುತೂರಾಟ ನಡೆಸಿ ಧ್ವಂಸಗೊಳಿಸಿದ ಆರೋಪ ಹೊತ್ತಿರುವ ಆರು ಆರೋಪಿಗಳಿಗೆ ಜಾಮೀನು ದೊರಕಿದೆ.
ಆರೋಪಿಗಳನ್ನು ಸೋಮವಾರ ಬೆಳಿಗ್ಗೆ ಹೈದರಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
ಆರೋಪಿಗಳ ಪರ ವಾದ ಮಂಡಿಸಿದ ವಕೀಲ ರಾಮದಾಸ್, ಉಸ್ಮಾನಿಯಾ ವಿಶ್ವವಿದ್ಯಾಲಯದ ಈ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ವಿದ್ಯಾರ್ಥಿಗಳು ಮುಂದಾಗಿದ್ದಾರೆ ಎಂದಿದ್ದಾರೆ.
PublicNext
23/12/2024 05:25 pm