ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಗೃಹ ಸಚಿವ ಅಮೀತ್ ಶಾ ರನ್ನ ಕೂಡಲೇ ಸಂಪುಟದಿಂದ ಕೈ ಬಿಡುವಂತೆ ಮನವಿ

ಚಳ್ಳಕೆರೆ :ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಕುರಿತು ಸದನದಲ್ಲಿ ವ್ಯಂಗ್ಯವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಕೂಡಲೇ ಸಚಿವ ಸಂಪುಟದಿಂದ ಕೈಬಿಡುವಂತೆ ಭಾರತೀಯ ರಾಷ್ಟ್ರೀಯ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್ ಮುಕಾಂತರ ಭಾರತ ರಾಷ್ಟ್ರದ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಭಾರತೀಯ ರಾಷ್ಟ್ರೀಯ ಅಲ್ಪಸಂಖ್ಯಾತರ ಕ್ಷಮಾಭಿವೃದ್ಧಿ ಸಂಘದ ಎಚ್ ಎಸ್ ಸೈಯಾದ್ ಡಾ, ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದಾಗಿ ದೇಶದ ಕೋಟ್ಯಂತರ ಜನರು ಸಾಮಾಜಿಕ ,ಶೈಕ್ಷಣಿಕ ,ಆರ್ಥಿಕ, ಧಾರ್ಮಿಕ ಮತ್ತು ರಾಜಕೀಯ ಸ್ಥಾನಮಾನಗಳನ್ನು ಅಲಂಕರಿಸಿ ಕಾರ್ಯಂಗ, ಶಾಸಕಾಂಗ ಮತ್ತು ನ್ಯಾಯಾಂಗ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಅಂಬೇಡ್ಕರ್ ಅವರನ್ನು ಕುರಿತು ಸದನದಲ್ಲಿ ಅಂಬೇಡ್ಕರ್ ಅವರ ಕುರಿತು ವ್ಯಂಗ್ಯವಾಗಿ ಮಾತನಾಡಿದ ಮೂಲಕ ಕೋಟ್ಯಂತರ ಭಾರತೀಯರಿಗೆ ಮಾನಸಿಕ ವೇದನೆ ಉಂಟು ಮಾಡಿರುವುದರಿಂದ ಈ ಕೂಡಲೇ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

Edited By : PublicNext Desk
Kshetra Samachara

Kshetra Samachara

23/12/2024 06:45 pm

Cinque Terre

1.2 K

Cinque Terre

0