ಚಿಕ್ಕಮಗಳೂರು: ಮಹಿಂದ್ರಾ ಪಿಕಪ್ ಹಾಗೂ ಬೊಲೆನೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಂದಿ ಗ್ರಾಮದಲ್ಲಿ ಸಂಭವಿಸಿದೆ.
ತೋಟದ ಕೆಲಸ ಮುಗಿಸಿ ಕಾರ್ಮಿಕರನ್ನು ಪಿಕಪ್ ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಬೊಲೆನೋ ಕಾರು ಚಿಕ್ಕಮಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳು ನಜ್ಜುಗುಜ್ಜಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
23/12/2024 06:49 pm