ಕುಂದಗೋಳ: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಛಲವಾದಿ ಮತ್ತು ಮಾದಿಗ ಸಮಾಜದವರು ಪ್ರತಿಭಟನೆ ನಡೆಸಿ ಗೃಹ ಸಚಿವ ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟಿದ್ದಾರೆ.
ಕುಂದಗೋಳ ಪಟ್ಟಣದ ಗಾಳಿ ಮರೇಮ್ಮದೇವಿ ದೇವಸ್ಥಾನದ ಬಳಿ ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿಗೆ ಪಾದಯಾತ್ರೆ ಮೂಲಕ ಆಗಮಿಸಿದ ಛಲವಾದಿ ಮತ್ತು ಮಾದಿಗ ಸಮಾಜದವರು ಅಂಬೇಡ್ಕರ್ ಹೇಳಿಕೆ ಖಂಡಿಸಿ ಘೋಷಣೆ ಕೂಗಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಕೊನೆಯಲ್ಲಿ ತಹಶೀಲ್ದಾರ್ ರಾಜು ಮಾವರಕರ ಮೂಲಕ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾದಿಗ ಮತ್ತು ಛಲವಾದಿ ಸಮಾಜದ ಮುಖಂಡರು, ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
23/12/2024 07:20 pm