ಮೈಸೂರು : ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಆರೋಪ ವಿಚಾರವಾಗಿ ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.
ಮೈಸೂರಿನ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಜಮಯಿದ ಕೈ ಕಾರ್ಯಕರ್ತರು, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆಗೆ ಚಾಲನೆ ನೀಡಿದರು. ಮೈಸೂರಿನ ಡಿಸಿ ಕಚೇರಿವರೆಗೂ ಪ್ರತಿಭಟನೆ ಮೆರವಣಿಗೆ ಸಾಗಿತು. ಪ್ರತಿಭಟನೆಯಲ್ಲಿ ಸಚಿವ ಮಹದೇವಪ್ಪ ಸೇರಿ, ಶಾಸಕರು, ಪ್ರಮುಖ ಮುಖಂಡರು ಭಾಗಿಯಾಗಿದ್ದರು.
PublicNext
23/12/2024 10:12 pm