ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'NHRC' ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆ 1993ರ ಅಡಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನೇಮಕ ಮಾಡಿದರು.

ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ NHRC ಅಧ್ಯಕ್ಷರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದೆ.

1993ರ ಮಾನವ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4ರ ಉಪ-ವಿಭಾಗ (1) ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ ಭಾರತದ ಅಧ್ಯಕ್ಷರಾದ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ನೇಮಕ ಮಾಡಿದರು.

Edited By : Abhishek Kamoji
PublicNext

PublicNext

23/12/2024 10:44 pm

Cinque Terre

20.14 K

Cinque Terre

0