ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ನನ್ನ ದೇವರು- ಪುಷ್ಪಾ ಅಮರನಾಥ್‌

ಮೈಸೂರು: ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಿಂಚಿತಾದ್ರು ಮಾನ ಮರ್ಯಾದೆ ಇದ್ರೆ ಅಮಿತ್ ಶಾ ಅವರನ್ನು ವಜಾ ಮಾಡಿ ಎಂದು ಮೈಸೂರಿನಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಆಕ್ರೋಶ ಹೊರಹಾಕಿದ್ದಾರೆ.

ಅವರು ಕಾಂಗ್ರೆಸ್ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗಿಯಾಗಿ, ಬಳಿಕ ಬಿಜೆಪಿ ವಿರುದ್ಧ ಕಿಡಿಕಾರಿದ್ರು. ನನ್ನ ದೇವರು ಬಾಬಾ ಸಾಹೇಬ್ ಅಂಬೇಡ್ಕರ್. ಇವತ್ತು ಮಹಿಳೆಯರ ಧ್ವನಿಯಾಗಿ, ಶೋಷಿತರ ದೇವರಾಗಿ ಇರುವವರು ನಮ್ಮ ಅಂಬೇಡ್ಕರ್. ಅವರ ಬಗ್ಗೆ ಮಾತನಾಡಿರೋ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಂಪುಟದಿಂದ ವಜಾ ಮಾಡಿ ಎಂದು ಆಗ್ರಹಿಸಿದರು.

Edited By : Manjunath H D
PublicNext

PublicNext

23/12/2024 10:53 pm

Cinque Terre

37.98 K

Cinque Terre

2

ಸಂಬಂಧಿತ ಸುದ್ದಿ