ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ ಸಂಪೂರ್ಣ ಬಂದ್

ಗದಗ : ನಗರದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ನೀಡಿದ ಹೇಳಿಕೆ ಕುರಿತು ದಲಿತ ಹಾಗೂ ಅಲ್ಪ ಸಂಖ್ಯಾತ ಮತ್ತು ಜಯ ಕರ್ನಾಟಕ ಸಂಘಟನೆ ಹಾಗೂ ಮುಂತಾದ ಸಂಘಟನೆಗಳು ಸೇರಿ ಇಂದು ಬಂದ ಗೆ ಕರೆ ನೀಡಿದ್ದರು. ಇಂದು ಬೆಳ್ಳಂ ಬೆಳಿಗ್ಗೆ ನಗರದ ಮುಳುಗುಂದ ನಾಕಾ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಅಮಿತ್ ಶಾ ವಿರುದ್ಧ ಘೋಷಣೆ ಕೂಗುಗಿದರು.

ಅಲ್ಲದೆ ಅಮಿತ್ ಶಾ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದರು ನಂತರ ಭಾವಚಿತ್ರ ಸುಟ್ಟು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಮಿತ್ ಶಾ ಅವರ ರಾಜೀನಾಮೆ ನೀಡಬೇಕು ಎಂದು ಘೋಷಣೆಯನ್ನು ಕೂಗಿದರು, ಅದರೊಂದಿಗೆ ರಾಜೀನಾಮೆ ನೀಡದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿ ನಂತರ ಬಸ್ ಡಿಪೋಗೆ ತೆರಳಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವುದು ಕಂಡು ಬಂತು.

ವರದಿ ಗೌರೀಶ ನಾಗಶೆಟ್ಟಿ ಪಬ್ಲಿಕ್ ನೆಕ್ಸ್ಟ್ ಗದಗ

Edited By : Manjunath H D
PublicNext

PublicNext

24/12/2024 12:20 pm

Cinque Terre

36.64 K

Cinque Terre

2