ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಾಯಗೊಂಡ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಜಿ. ಪರಮೇಶ್ವರ್, ಸಂತೋಷ್ ಲಾಡ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಗಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯವನ್ನು ಗೃಹ ಸಚಿವ ಜಿ. ಪರಮೇಶ್ವರ್, ಸಚಿವ ಸಂತೋಷ್ ಲಾಡ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಧೈರ್ಯ ಹೇಳಿದರು.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/12/2024 12:29 pm

Cinque Terre

68.15 K

Cinque Terre

0

ಸಂಬಂಧಿತ ಸುದ್ದಿ