ಬೆಳಗಾವಿಯ ಸುವರ್ಣಸೌಧದಲ್ಲಿ ಸಿಟಿ ರವಿ ಮೇಲೆ ಸಚವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆ ಪ್ರಕರಣ ಮತ್ತು ಸಿಟಿ ರವಿ ಬಂಧನ ಸಮಯದಲ್ಲಿ ಪೊಲೀಸರು ನಡೆದುಕೊಂಡ ವರ್ತನೆಯ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಇಂದು ಸಂಜೆ 5 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ರನ್ನ ಭೇಟಿಯಾಗಿ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ನಿಯೋಗದಿಂದ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದೆ . ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಜ್ಯಪಾಲರಿಗೆ ಸಂಪೂರ್ಣವಾಗಿ ವಿವರಣೆ ನೀಡಿ ಪೊಲೀಸ್ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಬಿಜೆಪಿ ದೂರು ನೀಡಲಿದೆ.
PublicNext
24/12/2024 02:29 pm